ಬೆಂಗಳೂರು: ಕೊರೊನಾ ಎಂಬ ಮಹಾಮಾರಿಯ ಆಗಮನದಿಂದ ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಸದ್ಯ ಎಲ್ಲವೂ ಸಹಜ ಸ್ಥಿತಿಗೆ ಬರುತ್ತಿದೆ. ಇದೀಗ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಟ್ಟು ಮೊದಲಿನಂತೆ ವಿವರವಾಗಿ ಉತ್ತರ ಬರೆಯುವ ಪದ್ಧತಿ ಜಾರಿಗೆ ತರಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಿರ್ಧರಿಸಿದೆ.
ಇನ್ನು ಈ ನಿರ್ಧಾರಕ್ಕೆ ಶಿಕ್ಷಕರ ಸಂಘಟನೆಗಳಿಂದ ಪರ-ವಿರೋಧ ವ್ಯಕ್ತವಾಗಿದೆ. ಕೊರೊನಾ ಹಿನ್ನೆಲೆಯಿಂದಾಗಿ 2021 ರಲ್ಲಿ ಮಾತ್ರ ಬಹು ಆಯೆ ಪದ್ಧತಿಯಲ್ಲಿ ಪ್ರಶ್ನೆಗಳನ್ನು ನೀಡಲಾಗುವುದು ಎಂದು ಮಂಡಳಿ ಈ ಮೊದಲೇ ತಿಳಿಸಿತ್ತು. ಅದರಂತೆ ತೀರ್ಮಾನ ಕೈಗೊಳ್ಳಲಾಗಿದೆ.
PublicNext
17/12/2021 02:09 pm