ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ದಳ್ಳುರಿಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು ಸದ್ಯ ಆ ರಜೆಯ ಅವಧಿಯನ್ನು ವಿಸ್ತರಿಸಲಾಗಿದೆ.
ನಿನ್ನೆಯಷ್ಟೇ ಫೆ.14 ರಿಂದ ಶಾಲೆಗಳು ಆರಂಭ ಉಳಿದಂತೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳಿಗೆ ಅನ್ವಯವಾಗುವಂತೆ ನೀಡಿರುವ ರಜೆಯನ್ನು ಫೆ.16 ವರೆಗೆ ಮುಂದುವರೆಸಲಾಗಿದೆ. ಎಂದು ಉನ್ನತ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದರು.
ಇದರ ಮಧ್ಯೆ ಪಿಯುಸಿಯವರ ಗತಿ ಏನು ಎನ್ನುವ ಚಿಂತೆ ಶುರುವಾಗಿತ್ತು. ಸದ್ಯ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಿಯು ವಿದ್ಯಾರ್ಥಿಗಳಿಗೂ ಫೆ.15 ರವರೆಗೆ ರಜೆ ಘೋಷಣೆ ಮಾಡಲಾಗಿದೆ.
PublicNext
12/02/2022 12:38 pm