ಬೆಂಗಳೂರು: ಹಿಜಾಬ್ ವರ್ಸಸ್ ಕೇಸರಿ ಶಾಲು ಜಟಾಪಟಿ ರಾಜ್ಯಾದ್ಯಂತ ಹರಡಿ ಉಗ್ರಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದ ಸರ್ಕಾರ, ಈಗ ಹಂತ ಹಂತವಾಗಿ ಶಾಲಾ ಕಾಲೇಜುಗಳನ್ನು ತೆರೆಯುತ್ತಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಾಥಮಿ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 'ಫೆ.16ರಿಂದ ಮೊದಲ ಮತ್ತು ದ್ವಿತೀಯ ಪಿಯು ಕಾಲೇಜುಗಳನ್ನು ಪುನಾರಂಭಿಸಲು ತೀರ್ಮಾನಿಸಲಾಗಿದ. ಇನ್ನು ಕಾಲೇಜು ಪುನಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ನೇತೃತ್ವದ ಸಭೆಯಲ್ಲಿ ಪಿಯು ಕಾಲೇಜುಗಳನ್ನು ತೆರೆಯಲು ನಿರ್ಧಾರ ಮಾಡಲಾಗಿದೆ. ರಾಜ್ಯದ ಪರಿಸ್ಥಿತಿ ಬಗ್ಗೆ ಅವಲೋಕಿಸಿ ನಿರ್ಧಾರಕ್ಕೆ ಬಂದಿದ್ದು, ಬುಧವಾರದಿಂದ ಪಿಯು ಮತ್ತು ಡಿಗ್ರಿ ಕಾಲೇಜ್‌ಗಳು ಓಪನ್ ಆಗಲಿವೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ಅವರು, ಪೋಷಕರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗುವುದು. ಪೊಲೀಸ್ ಇಲಾಖೆಗೆ ಬೇಕಾದ ಬಂದೋಬಸ್ತ್ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಕೋರ್ಟ್‌ನ ಸೂಚನೆ ಇದೆ. ಅದನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
PublicNext
14/02/2022 10:16 pm