ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪದವಿ ಪರೀಕ್ಷೆ ಮುಂದೂಡಲು ಎಲ್ಲ ವಿವಿಗಳಿಗೆ ಉನ್ನತ ಶಿಕ್ಷಣ ಸಚಿವಾಲಯ ಸೂಚನೆ

ಬೆಂಗಳೂರು: ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಅವರು, `ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಬೋಧನಾ ಕಾರ್ಯ ಅಪೂರ್ಣವಾಗಿರುವ ಹಿನ್ನೆಲೆಯಲ್ಲಿ ಪದವಿ ಕೋರ್ಸುಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಅವರು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚವರಿ ಮುಖ್ಯ ಕಾರ್ಯದರ್ಶಿಯನ್ನು ಕೋರಿದ್ದರು. ಪತ್ರದ ಮೂಲಕ ಅವರು, ‘ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿವೆ. ಆದರೆ, ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡುವಂತೆ ರಾಜ್ಯದ ಎಲ್ಲ ವಿ.ವಿ.ಗಳಿಗೂ ನಿರ್ದೇಶಿಸಬೇಕು’ ಎಂದು ಅವರು ಕೋರಿದ್ದರು.

Edited By : Nagaraj Tulugeri
PublicNext

PublicNext

17/02/2022 08:12 am

Cinque Terre

94.57 K

Cinque Terre

0

ಸಂಬಂಧಿತ ಸುದ್ದಿ