ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಬದಲಾವಣೆ- ಇಲ್ಲಿದೆ ಹೊಸ ವೇಳಾಪಟ್ಟಿ

ಬೆಂಗಳೂರು: ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಮತ್ತೊಂದು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ದ್ವಿತೀಯ ಪಿಯು ಹಾಗೂ ಜೆಇಇ ಪರೀಕ್ಷೆಯು ಒಟ್ಟಿಗೆ ಬಂದ ಕಾರಣ ಪರೀಕ್ಷೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಏಪ್ರಿಲ್ 22ರಿಂದ ಮೇ 5ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಆಕ್ಷೇಪಣೆ ಸಲ್ಲಿಸಲು ಮಾರ್ಚ್ 5ರೊಳಗೆ ಅವಕಾಶ ನೀಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೊದಲು ಏಪ್ರಿಲ್ 16ರಿಂದ ಮೇ 06 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ನಿಗದಿ ಮಾಡಲಾಗಿತ್ತು.

ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಟ್ವೀಟ್ ಮಾಡಿದ್ದು, ರಾಜ್ಯದ ದ್ವಿತೀಯ ಪಿಯು ಪರೀಕ್ಷೆ ಮತ್ತು ಎನ್‌ಟಿ‌ಎ ನಡೆಸುವ ಜೆಇಇ ಪರೀಕ್ಷೆಯ ಕೆಲ ಪತ್ರಿಕೆಗಳು ಒಂದೇ ದಿನಾಂಕದಂದು ಬಂದಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ (ತಾತ್ಕಾಲಿಕ) ಪರಿಷ್ಕರಿಸಲಾಗಿದೆ. ಈ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಮಾ.5ರ ಸಂಜೆ 5ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಹೊಸ ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ.

ಪರಿಷ್ಕೃತಗೊಂಡ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ.

ಏ. 22 - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಏ. 23 - ಹಿಂದಿ

ಏ. 25 - ಅರ್ಥಶಾಸ್ತ್ರ

ಏ. 26 - ಹಿಂದೂಸ್ಥಾನಿ ಸಂಗೀತ, ಮನಃಶಾಸ್ತ್ರ, ರಾಸಾಯನ ಶಾಸ್ತ್ರ

ಏ. 27 - ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಏ. 28 - ಕನ್ನಡ, ಅರೇಬಿಕ್

ಏ. 30 - ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

ಮೇ 2 - ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮೇ 4 - ಇಂಗ್ಲಿಷ್

ಮೇ 5 - ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

ಮೇ 6 - ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲಗಣಿತ

ಮೇ 7 - ಐಚ್ಚಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ

ಮೇ 9 - ಇತಿಹಾಸ, ಭೌತಶಾಸ್ತ್ರ

ಮೇ 11 - ರಾಜ್ಯಶಾಸ್ತ್ರ ಸಂಖ್ಯಾಶಾಸ್ತ್ರ

Edited By : Vijay Kumar
PublicNext

PublicNext

02/03/2022 08:30 pm

Cinque Terre

122.91 K

Cinque Terre

1

ಸಂಬಂಧಿತ ಸುದ್ದಿ