ಬೆಂಗಳೂರು: ಮಾರ್ಚ್ 25 ರಂದು ಸಿಇಟಿ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಈ ಬಾರಿ ನೀಟ್ ಪ್ರಕ್ರಿಯೆ ವಿಳಂಬವಾದ ಹಿನ್ನೆಲೆಯಲ್ಲಿ ಸಿಇಟಿ ಅರ್ಜಿ ಆಹ್ವಾನ ವಿಳಂಬವಾಗಿದೆ. ಜನವರಿಯಲ್ಲಿ ಸಿಇಟಿ ಅರ್ಜಿಯನ್ನು ಪ್ರಕಟಿಸಲಾಗುತ್ತಿತ್ತು. ಈ ಬಾರಿ ಮೇ 18ರವರೆಗೆ ವಾರ್ಷಿಕ ಪರೀಕ್ಷೆಯು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್ ಮೊದಲ ಅಥವಾ ಎರಡನೇ ಬಾರದಲ್ಲಿ ಸಿಇಟಿ ನಡೆಸಲು ಉದ್ದೇಶಿಸಿದ್ದು, ಮಾ.25ರಂದು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
PublicNext
24/03/2022 03:46 pm