ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಇಟಿ ಪರೀಕ್ಷೆ ವೇಳಾಪಟ್ಟಿ ಪ್ರಕಟ- ಯಾವ ದಿನ ಯಾವ ಪರೀಕ್ಷೆ? ಇಲ್ಲಿದೆ ಮಾಹಿತಿ

ಬೆಂಗಳೂರು: ವೃತ್ತಿ ಶಿಕ್ಷಣಕ್ಕೆ ಪ್ರವೇಶ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಸರ್ಕಾರ ಉದ್ದೇಶಿಸಿದೆ.

ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಸಿಇಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ಆನ್‌ಲೈನ್‌ ಮೂಲಕವೇ ನಿಗದಿತ ಶುಲ್ಕ ಪಾವತಿಸಲು ಏ.22ರವರೆಗೆ ಅವಕಾಶವಿದೆ. ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲಿ ಏನಾದರೂ ಮಾಹಿತಿ ಪರಿಷ್ಕರಿಸುವುದಿದ್ದರೆ ಅಂತವರಿಗೆ ಮೇ 2ರಿಂದ 6ರವರೆಗೆ ಕಾಲಾವಕಾಶವಿರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್​​ಲೋಡ್ ಮಾಡಿಕೊಳ್ಳಬಹುದು.

* ಜೂನ್ 16ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ,

* 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ

* 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ಪರೀಕ್ಷೆ

* ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

* ಆನ್‌ಲೈನ್‌ ಮೂಲಕವೇ ನಿಗದಿತ ಶುಲ್ಕ ಸಲ್ಲಿಸಲು ಏ.22ರವರೆಗೆ ಅವಕಾಶವಿದೆ.

Edited By : Vijay Kumar
PublicNext

PublicNext

28/03/2022 01:22 pm

Cinque Terre

134.12 K

Cinque Terre

1