ಬೆಂಗಳೂರು: ಇದೇ 22ರಿಂದ ಮೇ 18ರವರೆಗೆ ನಡೆಯುವ ದ್ವಿತೀಯ ಪಿಯು ಅಂತಿಮ ಪರೀಕ್ಷೆಗೆ ಹಾಜರಾಗುವವರು ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ ಅಥವಾ ಇತರ ಯಾವುದೇ ಧಾರ್ಮಿಕ ಆಚರಣೆಯ ಸಂಕೇತಗಳನ್ನು ಧರಿಸಿಕೊಂಡು ಬರುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಪರೀಕ್ಷಾ ಸಿದ್ಧತೆಯ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೀಕ್ಷಾ ಕೊಠಡಿಗಳಿಗೆ ಶಿಕ್ಷಕಿಯರೂ ಹಿಜಾಬ್ ಧರಿಸಿ ಬರುವಂತಿಲ್ಲ. ಈ ಬಗ್ಗೆ ಈಗಾಗಲೇ ಸುದೀರ್ಘ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಎಲ್ಲ ವಿಷಯಗಳನ್ನು ಸ್ಪಷ್ಟಪಡಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಕಾಲೇಜಿನವರು ನಿಗದಿ ಮಾಡಿರುವ ಸಮವಸ್ತ್ರ ಧರಿಸಿಕೊಂಡು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಆದರೆ ಎಲ್ಲೂ ಕೂಡ ಹಿಜಾಬ್ ಅಥವಾ ಧಾರ್ಮಿಕ ಆಚರಣೆಯ ಸಂಕೇತಗಳನ್ನು ಪರೀಕ್ಷಾ ಕೊಠಡಿಯೊಳಗೆ ಧರಿಸಿ ಬರುವಂತಿಲ್ಲ. ಈ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
PublicNext
19/04/2022 09:03 pm