ಬೆಂಗಳೂರು: ರಾಜ್ಯದಾದ್ಯಂತ ಪಿಯುಸಿ ಪರೀಕ್ಷೆಗಳು ನಡೆಯುತ್ತಿವೆ. ನಿನ್ನೆ ಸೋಮವಾರ ನಡೆದ ಅರ್ಥಶಾಸ್ತ್ರ ವಿಷಯದ ಪರೀಕ್ಷೆಗೆ 28 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಈ ಪೈಕಿ ತುಮಕೂರು ಜಿಲ್ಲೆಯಲ್ಲಿ 1,642 ಮೈಸೂರು ಜಿಲ್ಲೆಯಲ್ಲಿ 1,115 ಚಿತ್ರದುರ್ಗದಲ್ಲಿ 1,076 ಹಾಗೂ ಬೆಂಗಳೂರು ದಕ್ಷಿಣದಲ್ಲಿ 1,001 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಈ ಬಾರಿ ಒಟ್ಟು 4,12,593 ವಿದ್ಯಾರ್ಥಿಗಳು ಅರ್ಥಶಾಸ್ತ್ರ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು.
PublicNext
26/04/2022 01:31 pm