ಬೆಂಗಳೂರು-ರಾಜ್ಯದಲ್ಲಿ ಸೂರ್ಯನ ಪ್ರಖರತೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಬಿಸಿಲಿನ ತಾಪಮಾನ ಹೀಗೆ ಇದ್ದರೇ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಆರಂಭ ಜೂನ್ ಗೆ ಮೂಂದುಡುವ ಸಾಧ್ಯತೆ ಇದೆ. ಈ ಬಗ್ಗೆ ಸುಳಿವು ನೀಡಿರುವ ಶಿಕ್ಷಣ ಇಲಾಖೆ ಮೇ.16ರಿಂದ ಆರಂಭವಾಗಬೇಕಿದ್ದ ಶಾಲೆ ಜೂನ್ ತಿಂಗಳ ಮೊದಲ ವಾರದಲ್ಲಿ ಪ್ರಾರಂಭಿಸುವ ಚಿಂತನೆ ನಡೆಸಿದ್ದಾಗಿ ತಿಳಿಸಿದೆ.
ಮೇ 16ರಿಂದ 2002-23 ಶೈಕ್ಷಣಿಕ ವರ್ಷ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದೀಗ ವಿಪರೀತ ಬಿಸಿಲು, ತಾಪಮಾನ ಹೆಚ್ಚಾಗಿದೆ. ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ.
ಅಲ್ಲದೆ ಕೆಲ ಪೋಷಕರು ಜೂನ್ ತಿಂಗಳಲ್ಲೇ ಶೈಕ್ಷಣಿಕ ವರ್ಷ ಪ್ರಾರಂಭಿಸಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಶಿಕ್ಷಣ ಇಲಾಖೆ ಆಯುಕ್ತ ವಿಶಾಲ್ ರಾವ್ ಅವರ ನೇತೃತ್ವದಲ್ಲಿ ಚರ್ಚೆ ನಡೆಯುತ್ತಿದೆ. ಇನ್ನೊಂದು ವಾರದಲ್ಲಿ ಈ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ಸರ್ಕಾರ ಪ್ರಕಟಿಸುವ ಸಂಭವ ಇದೆ ಎಂದು ಹೇಳಲಾಗುತ್ತಿದೆ.
PublicNext
04/05/2022 05:07 pm