ಬೆಂಗಳೂರು: ಮೇ 19 ರಂದು ಎಸ್ಎಸ್ಎಲ್ಸಿ(SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಮೇ.19ಕ್ಕೆ ಎಸ್ಎಸ್ಎಲ್ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮರು ದಿನ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆದಿತ್ತು. ಸುಮಾರು 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
PublicNext
13/05/2022 11:02 am