ಬೆಂಗಳೂರು: ಮೇ 16ರ ಸೋಮವಾರ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮಕ್ಕಳನ್ನು ಬಹಳ ಸಂತೋಷದಿಂದ ಬರಮಾಡಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಸಿಹಿ ಖಾದ್ಯವನ್ನು ನೀಡಲು ಶಿಕ್ಷಣ ಇಲಾಖೆ ಸೂಚಿಸಿದೆ.
ಹೌದು. ಕೋವಿಡ್‌ನಿಂದಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಶಾಲೆಗಳಲ್ಲಿ ಸರಿಯಾಗಿ ಭೌತಿಕ ತರಗತಿಗಳು ನಡೆದಿಲ್ಲ. ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಬಹಳ ಹಿಂದೆ ಉಳಿದಿದ್ದಾರೆ. ಇದರಿಂದಾಗಿ 2022-23 ನೇ ಶೈಕ್ಷಣಿಕ ವರ್ಷವನ್ನು ಮೇ 16ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಸಿಹಿಯನ್ನು ಹಂಚಬೇಕು ಎಂದು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಸಿಹಿ ಖಾದ್ಯಗಳನ್ನು ಮಾಡಿ ಮಕ್ಕಳಿಗೆ ವಿತರಿಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಶಾಲೆಯ ಮುಖ್ಯ ಶಿಕ್ಷಕರು ಸ್ಥಳೀಯ ಜನಪ್ರತಿನಿಧಿಗಳು ಶಾಲೆಗೆ ಶ್ರಮದಾನ ಮೂಲಕ ಸರ್ಕಾರಿ ಶಾಲೆಯ ಅಭಿವೃದ್ದಿಯ ಜೊತೆ ಮಕ್ಕಳನ್ನು ಶಾಲೆಗೆ ಖುಷಿಯಂದ ಬರುವಂತೆ ನೋಡಿಕೊಳ್ಳುವ ಸಲುವಾಗಿ ಇಲಾಖೆ ಸಿಹಿ ವಿತರಣೆಯನ್ನು ಮಾಡುತ್ತಿದೆ.
PublicNext
15/05/2022 07:40 pm