ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

SSLC ಫಲಿತಾಂಶ ಹೊರಬಿದ್ದ ದಿನವೇ ಪೂರಕ ಪರೀಕ್ಷೆಯ ವೇಳಾಪಟ್ಟಿ‌ ಪ್ರಕಟ

ಬೆಂಗಳೂರು: ರಾಜ್ಯಾದ್ಯಂತ ಇಂದು ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತಮ ಫಲಿತಾಂಶ ಸಾಧಿಸಿದ ವಿದ್ಯಾರ್ಥಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ಮಧ್ಯೆ ಪರೀಕ್ಷೆ ಬರೆದು ಫೇಲ್ ಆದ ಅಭ್ಯರ್ಥಿಗಳು ಹಾಗೂ ಈ ಹಿಂದಿನ‌ ಎಲ್ಲ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ.

ಜೂನ್ 27ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದ್ದು, ಆನ್​ಲೈನ್ ಮುಖಾಂತರ ನೋಂದಾಯಿಸಿಕೊಳ್ಳಬಹುದು. ಇದಕ್ಕಾಗಿ ಮೇ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. 2002-03ರಿಂದ 2021- 22ರ ಮುಖ್ಯ ಪರೀಕ್ಷೆವರೆಗೆ ಮತ್ತು 2002-2003ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳು ಈ ಪೂರಕ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳಬಹುದು.

ಬೆಳಗ್ಗೆ 10:30ರಿಂದ 1:45ರ ತನಕ ಪರೀಕ್ಷೆ ನಡೆಯಲಿದ್ದು, ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನ‌ ನೀಡಲಾಗುತ್ತದೆ.

ಪರೀಕ್ಷಾ ಶುಲ್ಕದ ಮಾಹಿತಿ

ಒಂದು ವಿಷಯಕ್ಕೆ - 370 ರೂ.

ಎರಡು ವಿಷಯಕ್ಕೆ - 461 ರೂ.

ಮೂರು ಅಥವಾ ಮೂರಕ್ಕಿಂತ ಮೇಲ್ಪಟ್ಟು -620 ರೂ.

ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಮಾತ್ರ ಪೂರಕ ಪರೀಕ್ಷೆಯ ಪರೀಕ್ಷಾ ಶುಲ್ಕದಿಂದ ವಿನಾಯಿತಿ ಇದೆ.

ಸಹಾಯವಾಣಿ: ಪೂರಕ ಪರೀಕ್ಷೆಯ ನೋಂದಣಿ ಇತ್ಯಾದಿ‌ ವಿಷಯಗಳ ಕುರಿತು ಯಾವುದೇ ಮಾಹಿತಿ ಪಡೆಯಲು ಇಲಾಖೆ ಸಹಾಯವಾಣಿ ಆರಂಭಿಸಿದೆ. 080-23310075, 080-23310076, 080-23562267, 080- 23561271ಗೆ ಕರೆಮಾಡಿ ಮಾಹಿತಿ ಪಡೆಯಬಹುದಾಗಿದೆ.

Edited By : Vijay Kumar
PublicNext

PublicNext

19/05/2022 06:16 pm

Cinque Terre

78.21 K

Cinque Terre

0