ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೂನ್ 3ನೇ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ.ನಾಗೇಶ್ ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಜೊತೆಗೆ ಇಂದು ಟ್ವೀಟ್ ಮಾಡಿ, "ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ. ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ.

ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ನಿನ್ನೆ ಸುದ್ದಿಗೋಷ್ಠಿಯಲ್ಲಿ ಸಚಿವರು ತಿಳಿಸಿದ್ದರು.

Edited By : Vijay Kumar
PublicNext

PublicNext

20/05/2022 12:23 pm

Cinque Terre

215.83 K

Cinque Terre

2

ಸಂಬಂಧಿತ ಸುದ್ದಿ