ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಶ್ಮೀರ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

ಶ್ರೀನಗರ: ಕಾಶ್ಮೀರ ವಿಶ್ವವಿದ್ಯಾಲಯಕ್ಕೆ ಇದೇ ಮೊದಲ ಬಾರಿಗೆ ಮಹಿಳಾ ಉಪಕುಲಪತಿಯನ್ನು ನೇಮಕ ಮಾಡಲಾಗಿದೆ. ಪ್ರೊಫೆಸರ್ ನಿಲೋಫರ್ ಖಾನ್ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಕಾಶ್ಮೀರ ವಿಶ್ವವಿದ್ಯಾಲಯದ ಉಪಕುಲಪತಿಯನ್ನಾಗಿ ಅಲ್ಲಿನ ಉಪ ರಾಜ್ಯಪಾಲ ಮನೋಜ್ ಸಿನ್ಹಾ ಅವರು ನೇಮಕ ಮಾಡಿದ್ದಾರೆ.

ಖಾನ್ ಅವರು ಮೇ 21, 2022 ರ ಶನಿವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರೊಫೆಸರ್ ತಲಾತ್ ಅಹ್ಮದ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಿಲೋಫರ್ ಅವರನ್ನು ನೇಮಕ ಮಾಡಲಾಗಿದೆ. ನಿಲೋಫರ್ ಅವರು ಕಳೆದ 30 ವರ್ಷಗಳಿಂದ ಹೋಂ ಸೈನ್ಸ್ ನಲ್ಲಿ ಬೋಧನಾ ವೃತ್ತಿಯಲ್ಲಿ ಅನುಭವ ಹೊಂದಿದ್ದಾರೆ.

Edited By : Nagaraj Tulugeri
PublicNext

PublicNext

20/05/2022 08:23 pm

Cinque Terre

46.31 K

Cinque Terre

0

ಸಂಬಂಧಿತ ಸುದ್ದಿ