ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಜೂನ್ ತಿಂಗಳ ಕೊನೆ ವಾರ ಪ್ರಕಟವಾಗುವ ಸಾಧ್ಯತೆ ಇದೆ.
ಮೌಲ್ಯಮಾಪನ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ವಿಜ್ಞಾನ ವಿಭಾಗದ ಬಹುತೇಕ ಎಲ್ಲ ಜಿಲ್ಲೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ರಾಜಧಾನಿ ಬೆಂಗಳೂರಿನಲ್ಲಿ ಮಂದಗತಿಯಲ್ಲಿ ನಡೆದಿರುವುದು ಇದಕ್ಕೆ ಕಾರಣವಾಗಿದೆ.
ವಾಣಿಜ್ಯ, ಕಲಾ ವಿಭಾಗದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಉಡುಪಿ, ದಕ್ಷಿಣ ಕನ್ನಡ ಮೊದಲಾದ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಕಲಾ ವಿಭಾಗದ ಮೌಲ್ಯಮಾಪನ ಅಂತಿಮ ಹಂತ ದಲ್ಲಿದ್ದು, ಇನ್ನೆರಡು ದಿನದಲ್ಲಿ ಪೂರ್ಣಗೊಳ್ಳಲಿದೆ. ವಾಣಿಜ್ಯ ವಿಭಾಗದ ಮೌಲ್ಯಮಾಪನವೂ ಈ ವಾರದೊಳಗೆ ಮುಗಿಯಲಿದೆ.
ಮೌಲ್ಯಮಾಪನ ಮುಗಿದ ಅನಂತರ ಫಲಿತಾಂಶ ಪ್ರಕಟಿಸಲು ಸಿದ್ಧತೆಗಾಗಿ ಕನಿಷ್ಠ 10 ದಿನಗಳು ಬೇಕು. ವಿಜ್ಞಾನ ವಿಭಾಗದಲ್ಲಿ ಉತ್ತರ ಪತ್ರಿಕೆಗಳ ಸಂಖ್ಯೆಯೂ ಹೆಚ್ಚಿದ್ದು, ಮೌಲ್ಯಮಾಪಕರ ಕೊರತೆ ಇರುವುದರಿಂದ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಠ 15 ದಿನ ಬೇಕು.ಹೀಗಾಗಿ ಫಲಿತಾಂಶ ವಿಳಂಬವಾಗಬಹುದು ಎನ್ನಲಾಗುತ್ತಿದೆ.
PublicNext
31/05/2022 02:59 pm