ಬೆಂಗಳೂರು: ತನ್ನ ತಾಂತ್ರಿಕ ದೋಷದ ಬಗ್ಗೆ ಕೊನೆಗೂ ಎಚ್ಚೆತ್ತುಕೊಂಡ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪ್ರವೇಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ಕಲ್ಪಿಸಿದೆ.
ಸರ್ವರ್ ಸಮಸ್ಯೆ, ಬೈಯೋಮೆಟ್ರಿಕ್, ಫೋಟೋ, ಸಹಿ ಅಪ್ಲೋಡ್ ಆಗದ ಸಮಸ್ಯೆ ಸೇರಿದಂತೆ ವಿವಿಧ ತಾಂತ್ರಿಕ ದೋಷದಿಂದ ಅನೇಕ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಕಣ್ಣೀರು ಇಟ್ಟಿದ್ದರೆ, ಅವರ ಪೋಷಕರು ಇಲಾಖೆ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಈ ವಿಚಾರವನ್ನು ನಿಮ್ಮ ಪಬ್ಲಿಕ್ ನೆಕ್ಸ್ಟ್ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಇದರಿಂದ ಎಚ್ಚೆತ್ತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸಲು ಇಂದು (ಸೋಮವಾರ) ಸಂಜೆ 6 ಗಂಟೆಯಿಂದ ನಾಳೆ (ಮಂಗಳವಾರ) ಸಂಜೆ 6 ಗಂಟೆವರೆಗೆ ಅವಕಾಶ ನೀಡಿದೆ. ಅರ್ಜಿ ಸಲ್ಲಿಸಿದ ಬಳಿಕ ವಿದ್ಯಾರ್ಥಿಗಳು ಅಂತಿಮ ಅರ್ಜಿ ಹಾಗೂ ಪ್ರವೇಶ ಪತ್ರವನ್ನು ಪಡೆದುಕೊಳ್ಳಬಹುದಾಗಿದೆ.
ವೃತ್ತಿಪರ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸಲು ನಡೆಸಲ್ಪಡುವ ಸಿಇಟಿ ಪರೀಕ್ಷೆಯು ಈ ಬಾರಿ ಜೂನ್ 16, 17 ಹಾಗೂ 18ರಂದು ನಡೆಯಲಿದೆ.
PublicNext
06/06/2022 04:33 pm