ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಗುರುವಾರದಿಂದ ಸಿಇಟಿ: ಹಿಜಾಬ್ ಧರಿಸಿ ಬರುವಂತಿಲ್ಲ

ಬೆಂಗಳೂರು: ನಾಳೆ ಗುರುವಾರದಿಂದ ಜೂನ್ 18 ರವರೆಗೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಕಿವಿ ಮತ್ತು ತಲೆ ಮುಚ್ಚುವ ಯಾವುದೇ ವಸ್ತ್ರಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.

ಪರೀಕ್ಷಾರ್ಥಿಗಳು ಯಾವುದೇ ಒಡವೆಗಳು, ತಲೆ, ಕಿವಿ ಮುಚ್ಚುವ ಉಡುಪು ಹಾಗೂ ಉದ್ದ ತೋಳಿನ ಉಡುಪು ಧರಿಸುವಂತಿಲ್ಲ. ಈ ಸೂಚನೆಗಳನ್ನು ಪರೀಕ್ಷಾ ಪ್ರವೇಶ ಪತ್ರದಲ್ಲಿ ನಮೂದಿಸಲಾಗಿದೆ. ರಾಜ್ಯದಲ್ಲಿ ಜೂನ್ 16, 17 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಪರೀಕ್ಷೆಗೆ ಯಾವುದೇ ಸಮವಸ್ತ್ರ ನಿಗದಿ ಮಾಡಿಲ್ಲ. ಆದರೆ ಸರ್ಕಾರದ ವಸ್ತ್ರ ನಿಯಮವನ್ನು ಪಾಲಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ತಿಳಿಸಿದ್ದಾರೆ.

ಇನ್ನು ಸಿಇಟಿ ಪರೀಕ್ಷೆಗೆ ಹಾಜರಾಗುವವರು ಹಿಜಾಬ್ ಧರಿಸುವಂತಿಲ್ಲ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬರುವವರಿಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಜೊತೆಗೆ ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಿ ಸಿಇಟಿ ಪರೀಕ್ಷೆಗೆ ಬರುವಂತಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಎನ್-95 ಅಥವಾ ಬಟ್ಟೆ ಮಾಸ್ಕ್‌ಗಳಿಗೆ ಅವಕಾಶ ಇರುವುದಿಲ್ಲ. ಕಡ್ಡಾಯವಾಗಿ ಸರ್ಜಿಕಲ್ ಮಾಸ್ಕ್ ಧರಿಸಬೇಕು. ಪರೀಕ್ಷೆ ಕೇಂದ್ರಗಳಿಗೆ ಪರೀಕ್ಷಾರ್ಥಿಗಳು ಹಾಗೂ ಕೊಠಡಿ ಮೇಲ್ವಿಚಾರಕರು ಯಾವುದೇ ತರಹದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲ್ಸ್ ಸೆಟ್, ಲಾ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ರಿಷ್ಟ ವಾಚ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.

Edited By : Nagaraj Tulugeri
PublicNext

PublicNext

15/06/2022 03:25 pm

Cinque Terre

35.52 K

Cinque Terre

0

ಸಂಬಂಧಿತ ಸುದ್ದಿ