ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆಯು 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಮೇ 19ರಂದು ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮುಕ್ತಾವಾಗಿದ್ದು, ಈಗ ಕರ್ನಾಟಕ ಶಿಕ್ಷಣ ಇಲಾಖೆ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಜೂನ್ 27 ರಿಂದ ಜುಲೈ 4ರ ವರಗೆ ಪೂರಕ ಪರೀಕ್ಷೆಯನ್ನು ನಡೆಸಲು ಶಿಕ್ಷಣ ಮಂಡಳಿ ನಿರ್ಧರಿಸಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲೆಗಳಲ್ಲಿ ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ.
SSLC ಪೂರಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ:
* ಜೂನ್ 27: ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ
* ಜೂನ್ 28 : ಪ್ರಥಮ ಭಾಷೆ ಕನ್ನಡ, ತೆಲುಗು, ಇಂಗ್ಲಿಷ್, ಮರಾಠಿ, ಉರ್ದು, ಸಂಸ್ಕೃತ
* ಜೂನ್ 29 : ದ್ವೀತಿಯ ಭಾಷೆ (ಇಂಗ್ಲಿಷ್- ಕನ್ನಡ)
* ಜೂನ್ 30 : ಸಮಾಜಶಾಸ್ತ್ರ
* ಜುಲೈ 1: ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)
* ಜುಲೈ 2: ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
* ಜುಲೈ 4: ಗಣಿತ, ಸಮಾಜಶಾಸ್ತ್ರ
PublicNext
21/06/2022 11:42 am