ಕೊಡಗು : ರಾಜ್ಯದ ಪ್ರತಿ ಸರ್ಕಾರಿ ಶಾಲೆಗಳಿಗೆ ಮುಂದಿನ 15 ದಿನದ ಒಳಗೆ ಸಮವಸ್ತ್ರ ಮತ್ತು ಶೂಗಳ ವಿತರಣೆ ಕಾರ್ಯ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಜಿಲ್ಲೆಯ ಪಾಲಿಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾದ ಪರಿಶಿಷ್ಟ ವರ್ಗ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ 15 ದಿನದ ಒಳಗೆ ರಾಜ್ಯದ ಪ್ರತಿ ಸರ್ಕಾರಿ ಶಾಲೆಗಳಿಗೆ ಸಮವಸ್ತ್ರ ಮತ್ತು ಶೂಗಳ ವಿತರಣೆ ಕಾರ್ಯ ನಡೆಯಲಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ.
ಕಾಡಿನಲ್ಲಿ ವಾಸಿಸುವ ಮಕ್ಕಳು ಶಾಲೆಗೆ ಹೋಗಲು ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಓದಿನಲ್ಲಿ ಹಿಂದುಳಿಯುತ್ತಾರೆ. ಈ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಬುಡಕಟ್ಟು ಸಮುದಾಯದ ಮಕ್ಕಳ ಓದಿಗಾಗಿ ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದು ಹೇಳಿದ್ದಾರೆ.
PublicNext
13/07/2022 07:53 am