ಭೋಪಾಲ್: ವಿದ್ಯಾರ್ಥಿಗಳು ತರಗತಿಯಲ್ಲಿ ಛತ್ರಿ ಹಿಡಿದು ಪಾಠ ಕೇಳುತ್ತಿರುವ ದುಸ್ಥಿತಿ ಪ್ರಸಂಗವು ಮಧ್ಯಪ್ರದೇಶದ ಸಿಯೋನಿಯಲ್ಲಿ ಕಂಡು ಬಂದಿದೆ.
ಸಿಯೋನಿಯ ಘನ್ಸೋರ್‌ನ ಸರ್ಕಾರಿ ಶಾಲೆಯ ದುಸ್ಥಿತಿ ಇದಾಗಿದೆ. ಮಳೆ ಹಿನ್ನಲೆಯಲ್ಲಿ ಶಾಲಾ ಛಾವಣಿಯು ನಿರಂತರವಾಗಿ ಸೋರುತ್ತಿದ್ದು, ವಿದ್ಯಾರ್ಥಿಗಳು ತರಗತಿಯೊಳಗೆ ಛತ್ರಿ ಹಿಡಿದು ಕುಳಿತು ಪಾಠ ಕೇಳಿದ್ದಾರೆ. ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸಂಬಂಧ ಮೇ ತಿಂಗಳಿನಲ್ಲಿ ಉನ್ನತ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಶಾಲಾ ಮುಖ್ಯೋಪಾಧ್ಯಾಯರು ದೂರಿದ್ದಾರೆ.
PublicNext
27/07/2022 07:28 pm