ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಸಿದ್ದಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ ಕೇಂದ್ರ ಸರ್ಕಾರ

ತುಮಕೂರು: ನಾಡಿನ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ತುಮಕೂರಿನ ಸಿದ್ದಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ರಾಷ್ಟ್ರೀಯ ವೈದ್ಯಕೀಯ ಆಯೋಗವು ಸಿದ್ದಗಂಗಾ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಗೆ ಮೊದಲ ವರ್ಷದ ಎಂಬಿಬಿಎಸ್ ತರಗತಿಗಳನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಅನುಮತಿ ನೀಡಿದೆ.

ತುಮಕೂರಿನ ಸಿದ್ದಗಂಗಾ ಮಠವು ಮೆಡಿಕಲ್ ಕಾಲೇಜು ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ಮತ್ತು ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿದ ನಂತರ ಎನ್.ಎಂ.ಸಿ (ರಾಷ್ಟ್ರೀಯ ವೈದ್ಯಕೀಯ ಆಯೋಗ) ಪ್ರಥಮ ಬ್ಯಾಚ್​​ನಲ್ಲಿ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿ ಸಿದ್ದಗಂಗಾ ಮಠದ ಆಡಳಿತ ಮಂಡಳಿಗೆ ಪತ್ರ ಬರೆದಿದೆ.

ವೈದ್ಯಕೀಯ ಕಾಲೇಜು ಹೊಂದುವ ಮೂಲಕ ಸಿದ್ದಗಂಗಾ ಮಠ ಸಹ ಮೆಡಿಕಲ್ ಕಾಲೇಜು ಹೊಂದಿದ ಪ್ರತಿಷ್ಠಿತ ಮಠಗಳ ಸಾಲಿಗೆ ಸೇರಿದೆ. ಮೈಸೂರಿನ ಜೆಎಸ್​​ಎಸ್, ಸಿರಿಗೆರೆಯ ತರಳಬಾಳು, ಆದಿಚುಂಚನಗಿರಿ ಮತ್ತು ಚಿತ್ರದುರ್ಗದ ಬೃಹನ್ಮಠಗಳು ಈಗಾಗಲೇ ವೈದ್ಯಕೀಯ ಕಾಲೇಜುಗಳನ್ನು ನಡೆಸುತ್ತಿವೆ.

ಕಳೆದ ವರ್ಷ ರಾಜ್ಯ ಸರ್ಕಾರವು ಸಿದ್ದಗಂಗಾ ಮಠಕ್ಕೆ ಮೆಡಿಕಲ್ ಕಾಲೇಜ್ ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ನಿರಪೇಕ್ಷಣಾ ಪತ್ರ ನೀಡಿತ್ತು. ಸಿದ್ದಗಂಗಾ ಮಠಕ್ಕೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದರಿಂದ ತುಮಕೂರು ಜಿಲ್ಲೆಗೆ ಒಟ್ಟು 3 ಮೆಡಿಕಲ್ ಕಾಲೇಜು ಸಿಕ್ಕಂತಾಗಿದೆ.

Edited By : Vijay Kumar
PublicNext

PublicNext

25/08/2022 02:50 pm

Cinque Terre

35.19 K

Cinque Terre

0

ಸಂಬಂಧಿತ ಸುದ್ದಿ