ಬೆಂಗಳೂರು : ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಿ, 100 ಹೊಸ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗುವುದು, ಬಾಕಿ ಇರುವ 9 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
PublicNext
25/08/2022 06:00 pm