ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುದ್ರಣ ಕಾಶಿಯಲ್ಲಿ ಮುಂದುವರೆದ ಮಳೆ : ಶಾಲಾ ಕಾಲೇಜುಗಳಿಗೆ ರಜೆ

ಗದಗ: ಮುದ್ರಣ ಕಾಶಿ ಗದಗ ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದೆ. ಬೆಳಿಗ್ಗೆಯಿಂದಲೇ ಮಳೆರಾಯನ ಆರ್ಭಟ ಶುರುವಾಗಿದ್ದು ಜನತೆ ಮನೆ ಬಿಟ್ಟು ಹೊರಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆ ಸುರಕ್ಷತೆ ಕ್ರಮವಾಗಿ ಗದಗ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ರಜೆ ಘೋಷಿಸಿದ್ದು ಜಿಲ್ಲೆಯ ಎಲ್ಲ ತಾಲೂಕಿನ ತಹಶೀಲ್ದಾರರ ಸಲಹೆ ಪಡೆದು ರಜೆ ಘೋಷಿಸುವ ನಿರ್ಧಾರ ಕೈಗೊಂಡಿದ್ದಾರೆ.

ಈ ಹಿನ್ನೆಲೆ ಇಂದು ಜಿಲ್ಲೆಯಾದ್ಯಂತ ಎಲ್ಲ ಶಾಲೆ ಕಾಲೇಜಿಗೆ ರಜೆ ನೀಡಲಾಗಿದೆ. ಸುರಕ್ಷಿತ ಕ್ರಮವಾಗಿ ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದ್ದು, ಸರ್ಕಾರಿ ರಜೆ ದಿನ ಶಾಲೆ ನಡೆಸುವಂತೆ ಸೂಚನೆ ನೀಡಲಾಗಿದೆ.

Edited By : Nirmala Aralikatti
PublicNext

PublicNext

30/08/2022 10:52 am

Cinque Terre

22.04 K

Cinque Terre

0