ಬೆಂಗಳೂರು: ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 778 ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಸರ್ಕಾರ ಆಗಸ್ಟ್ ತಿಂಗಳಲ್ಲೇ ಅನುಮತಿ ನೀಡಿತ್ತು. ಸದ್ಯ ಈಗ ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, 'ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ' ಎಂದು ತಿಳಿಸಿದ್ದಾರೆ.
PublicNext
10/09/2022 06:45 pm