ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2,500 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಇದೀಗ ಮತ್ತೊಂದು ನೇಮಕಾತಿಗೆ ಮುಂದಾಗಿದೆ. 2016ರ ನಂತರ ನಡೆಯದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ಇದಾಗಿದ್ದು, 6 ವರ್ಷಗಳ ಬಳಿಕ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.

ಈ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ ಖಚಿತ ಪಡಿಸಿದ್ದಾರೆ. "ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಹ ಶಿಕ್ಷಕರು - 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು - 200 ಹುದ್ದೆಗಳು. ವಿಶೇಷ ಶಿಕ್ಷಕರು - 100 ಹುದ್ದೆಗಳು" ಎಂದು ಸಚಿವರು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

13/09/2022 01:33 pm

Cinque Terre

20.93 K

Cinque Terre

0