ಬೆಂಗಳೂರು : ಇನ್ಮುಂದೆ ಪ್ರತಿ ಶಾಲೆಗಳಲ್ಲಿಯೂ ನಿತ್ಯ ಐದೂವರೆ ಗಂಟೆ ಮಾತ್ರ ಕ್ಲಾಸ್ ತೆಗೆದುಕೊಳ್ಳಬೇಕು ಎಂದು ಸರ್ಕಾರ ಆದೇಶಿಸಿದೆ.
ಮಕ್ಕಳಿಗೆ ಯಾವುದೇ ರೀತಿಯ ಮಾನಸಿಕ ಒತ್ತಡ ಉಂಟಾಗದಂತೆ ಕ್ರಮವಹಿಸಲು ಶಿಕ್ಷಣ ಇಲಾಖೆ ಈ ಆದೇಶವನ್ನು ಮಾಡಿದೆ. ಸದ್ಯ ನಿಯಮ ಉಲ್ಲಂಘಿಸಿದ ಖಾಸಗಿ ಶಾಲೆಗಳಿಗೆ ನೋಟಿಸ್ ನೀಡಲಾಗುತ್ತಿದೆ.
ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಖಾಸಗಿ ಆಡಳಿತ ಮಂಡಳಿಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983, ಕಲಂ 30, 31ರ ಅಡಿಯಲ್ಲಿ ನೊಂದಾಯಿಸಿ ಕಲಂ 36ರಂತೆ ಮಾನ್ಯತೆಯನ್ನು ಪಡೆದು ನಡೆಸುತ್ತಿವೆ. ಇಂತಹ ಶಾಲೆಗಳು ರಾಜ್ಯ ಸರ್ಕಾರದಿಂದ ಅಥವಾ ಇಲಾಖೆಯಿಂದ ಹೊರಡಿಸುವ ಆದೇಶದಂತೆ ಶಾಲೆಗಳನ್ನು ನಡೆಸುವುದು ಕಡ್ಡಾಯವಾಗಿರುತ್ತದೆ.
ಸದ್ಯ ಕೆಲ ಖಾಸಗಿ ಶಾಲೆಗಳು ಈ ನಿಯಮವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಗರಂ ಆಗಿದೆ. ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಶಾಲೆಗಳು ತಮ್ಮಿಷ್ಟಕ್ಕೆ ತಕ್ಕಂತೆ ತರಗತಿಗಳನ್ನು ನಡೆಸಿತ್ತಿವೆ ಎಂದು ಸಾರ್ವಜನಿಕರಿಂದ ದೂರು ಬಂದಿದ್ದು ಉದಾಸೀನ ತೋರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
PublicNext
21/09/2022 05:31 pm