ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದರು. ನಂತರ ಮಾತನಾಡಿದ ಸಚಿವರು ‘ರಾಷ್ಟ್ರೀಯ ಶಿಕ್ಷಣ ನೀರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮಕ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು.
ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಾಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ.
PublicNext
23/09/2022 07:45 am