ದಾವಣಗೆರೆ: ನಾವು ಯಾವ ಕಾರಣಕ್ಕೂ ಹಿಜಾಬ್ ತೆಗೆಯೋದಿಲ್ಲ ಎಂದ ವಿದ್ಯಾರ್ಥಿನಿಯರು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬಹಿಷ್ಕರಿಸಿ ವಾಪಸ್ ಮನೆಗೆ ತೆರಳಿದ್ದಾರೆ. ದಾವಣಗೆರೆ ಜಿಲ್ಲೆ ಮಲೇಬೆನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದಲ್ಲಿ ಈ ಘಟನೆ ನಡೆದಿದೆ.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯರಲ್ಲಿ 16 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿದ್ದಾರೆ. ನಮಗೆ ಹಿಜಾಬ್ ತೆರೆಯದಿರುವಂತೆ ಮನೆಯಲ್ಲಿ ಹೇಳಿದ್ದಾರೆ. ಹೀಗಾಗಿ ಯಾವ ಕಾರಣಕ್ಕೂ ನಾವು ಹಿಜಾಬ್ ತೆಗೆಯುವುದಿಲ್ಲ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ.ಈ ವೇಳೆ ಶಿಕ್ಷಕರು ಹಿಜಾಬ್ ತೆಗೆಯುವಂತೆ ಮನವಿ ಮಾಡಿದರೂ ಕೇಳದೇ ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಯಿಂದ ಹೊರನಡೆದಿದ್ದಾರೆ. ಹೀಗೆ ಹೊರನಡೆದ ವಿದ್ಯಾರ್ಥನಿಯರಲ್ಲಿ 6 ಜನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯಲು ಬಂದವರಾಗಿದ್ದರು. ಇನ್ನುಳಿದವರು 9ನೇ ತರಗತಿ ವಿದ್ಯಾರ್ಥಿನಿಯರಾಗಿದ್ದಾರೆ. ಉಳಿದ ಕೆಲವರು ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾಗಿದ್ದಾರೆ.
PublicNext
15/02/2022 03:23 pm