ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ : ಸಪ್ತಸಾಗರ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ಹಬ್ಬ ಆಚರಣೆ

ಅಥಣಿ : ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಪರಂಪರೆಯನ್ನು ನಮ್ಮ ದೇಶ ಹೊಂದಿದೆ. ಈ ದೇಶದ ಪುಣ್ಯ ಭೂಮಿಯನ್ನು ಅವಹೇಳನ ಮಾಡುವ ಯಾವುದೇ ವ್ಯಕ್ತಿಯನ್ನು ಕಪಾಳಕ್ಕೆ ಹೊಡೆದು ವಿರೋಧಿಸುವ ಗುಣವನ್ನು ಪ್ರತಿಯೊಬ್ಬರು ಬೆಳೆಸಿಕೊಂಡಾಗ ಮಾತ್ರ ಸ್ವಾತಂತ್ರ್ಯ ಹೊರಾಟಗಾರರಿಗೆ ನಿಜವಾದ ಗೌರವ ಸಲ್ಲಿಸಿದಂತೆ ಎಂದು ಡಾ. ಮಹಾಂತ ಪ್ರಭು ಸ್ವಾಮೀಜಿ ಹೇಳಿದರು.

ಅದಮ್ಯ ಫೌಂಡೇಶನ್ ಹಾಗೂ ಅಂತರ್ಯಾಮಿ ಫೌಂಡೇಶನ್ ಸಹಯೋಗದಲ್ಲಿ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ಹಬ್ಬ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡುತ್ತಾ ಈ ದೇಶದ ಸ್ವಾತಂತ್ರ್ಯ ಅದೆಷ್ಟೋ ಬಲಿದಾನಗಳಿಂದ ಬಂದಿದೆ. ಇಂದಿನ ಯುವಕರು ತಮ್ಮ ಕ್ರಿಯಾಶೀಲತೆಯನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ಶಿಸ್ತು ಹಾಗೂ ದೇಶಭಕ್ತಿ ರೂಢಿಸಿಕೊಂಡು ಬದುಕು ಕಟ್ಟಿಕೊಳ್ಳಬೇಕು ಎಂದರು.

ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಮಾತನಾಡಿ ದೇಶದ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ನಾವೆಲ್ಲ ಇರುವುದು ಪುಣ್ಯ ಎಂದರು.

ನಂತರ ವಿದ್ಯಾರ್ಥಿಗಳಿಗೆ ನಡೆಸಿದ್ದ ಭಾಷಣ, ರಸಪ್ರಶ್ನೆ ಹಾಗೂ ಗಾಯನ ಸ್ಪರ್ಧೆಗಳ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ರಾವಸಾಬ ಸಂಗಲಗಿ, ಅದಮ್ಯ ಫೌಂಡೇಶನ್ ಅಧ್ಯಕ್ಷ ಮಹೇಶ್ ನರಗಟ್ಟಿ, ಅಂತರ್ಯಾಮಿ ಫೌಂಡೇಶನ್ ಅಧ್ಯಕ್ಷ ನಾಗರಾಜ ಗಸ್ತಿ, ಪತ್ರಕರ್ತ ವಿನಾಯಕ ಮಠಪತಿ, ಸೇರಿದಂತೆ ಮುಂತಾದವರಿದ್ದರು.

Edited By :
PublicNext

PublicNext

10/08/2022 10:02 pm

Cinque Terre

49.85 K

Cinque Terre

1

ಸಂಬಂಧಿತ ಸುದ್ದಿ