ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೇನಲ್ಲಿ ಪಿಯುಸಿ, ಜೂನ್ ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸುರೇಶ್ ಕುಮಾರ್

ಬೆಂಗಳೂರು: ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್ ಎಸ್ಎಲ್ ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಗಳ ಅಂಶಗಳನ್ನು ಅಂತಿಮಗೊಳಿಸಲಾಗಿದೆ. ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸುತ್ತೇವೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

06/01/2021 08:25 pm

Cinque Terre

66.29 K

Cinque Terre

3

ಸಂಬಂಧಿತ ಸುದ್ದಿ