ಬೆಂಗಳೂರು: ಸಂಕ್ರಾಂತಿ ನಂತರ ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ದ್ವಿತೀಯ ವರ್ಷದ ತರಗತಿಗಳನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸರ್ಜಾರಿ ಹಾಗೂ ಖಾಸಗಿ ವಲಯದ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಅವರು ಆನ್ಲೈನ್ ಸಭೆ ನಡೆಸಿದರು.
ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅಶ್ವತ್ಥನಾರಾಯಣ ಪದವಿ ಹಂತದಲ್ಲಿ ನೇರ ತರಗತಿಗಳನ್ನು ಆರಂಭಿಸುವಂತೆ ಅಧಿಕಾರಿಗಳು ಹಾಗೂ ಕುಲಪತಿಗಳಿಂದ ಸಲಹೆಗಳು ಬಂದಿವೆ. ಸಂಕ್ರಾಂತಿ ನಂತರ ಯಾವ ದಿನದಿಂದ ಆಫ್ಲೈನ್ ತರಗತಿ ಆರಂಭಿಸಬೇಕು ಎಂಬುದರ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
PublicNext
08/01/2021 08:34 pm