ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖಾಸಗಿ ಶಾಲೆಗಳು ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ

ಬೆಂಗಳೂರು: 2019-20ನೇ ಸಾಲಿನಲ್ಲಿ ಶೇ. 70 ರಷ್ಟು ಖಾಸಗಿ ಶಾಲೆಗಳು ಬೋಧನಾ ಶುಲ್ಕ ಮಾತ್ರ ಪಡೆಯಬೇಕು ಎಂದು ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಮಾದರಿಯ ಪಠ್ಯಕ್ರಮದ ಖಾಸಗಿ ಶಾಲೆಗಳು 2019ನೇ ಸಾಲಿನಲ್ಲಿ ಶೇ. 70 ರಷ್ಟು ಬೋಧನಾ ಶುಲ್ಕ ಮಾತ್ರ ಪಡೆಯಬೇಕು. ಬೋಧನಾ ಶುಲ್ಕ ಹೊರತುಪಡಿಸಿ ಇತರೆ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಟ್ರಸ್ಟ್ ಗೆ ಡೊನೇಷನ್ ಪಡೆಯುವಂತಿಲ್ಲ ಎಂದು ಸೂಚಿಸಿದ್ದಾರೆ.

ಈಗ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಎರಡು ಅಥವಾ ಮೂರು ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡಬೇಕು. ಈ ಬಗ್ಗೆ ಶಾಲೆ ಹಾಗೂ ಪೋಷಕರಿಂದ ಬರುವ ದೂರುಗಳ ನಿರ್ವಹಣೆಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸಿಮಿತಿ ರಚನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

Edited By : Nagaraj Tulugeri
PublicNext

PublicNext

29/01/2021 06:05 pm

Cinque Terre

83.4 K

Cinque Terre

2