ಬೆಂಗಳೂರು: ರಾಜ್ಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಯ (ಕ್ಯಾಮ್ಸ್) ಫೆಬ್ರವರಿ 23ರಂದು ಬೃಹತ್ ಪ್ರತಿಭಟನಾ ರ‍್ಯಾಲಿಗೆ ಕರೆ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, ''ಶಿಕ್ಷಣ ಇಲಾಖೆಯ ಧೋರಣೆ, ದ್ವಂದ್ವ ನಿಲುವು, ಅವೈಜ್ಞಾನಿಕ ಕ್ರಮಗಳನ್ನು ಖಂಡಿಸಿ ಇದೇ 23ರಂದು ಬೃಹತ್ ಪ್ರತಿಭಟನಾ ರ‍್ಯಾಲಿ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಅಂದು ಬೆಳಿಗ್ಗೆ 10 ಗಂಟೆಗೆ ರ‍್ಯಾ ಆರಂಭವಾಗಲಿದೆ. ರಾಜ್ಯದಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ, ಶಿಕ್ಷಕರು, ವ್ಯವಸ್ಥಾಪಕರು ಸೇರಿ 25 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
PublicNext
20/02/2021 03:06 pm