ಬೆಂಗಳೂರು: ರಾಜ್ಯದಲ್ಲಿ 6ರಿಂದ 8ನೇ ತರಗತಿಗಳು ಫೆ. 22, ಸೋಮವಾರದಿಂದ ಆರಂಭವಾಗಲಿವೆ. ಆದರೆ ಬೆಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಸಹಿತ ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳ ಶಾಲೆಗಳಲ್ಲಿ ಅಂದಿನಿಂದ 8ನೇ ತರಗತಿಗೆ ಮಾತ್ರ ಶಾಲೆ, ಅದಕ್ಕಿಂತ ಕಿರಿಯರಿಗೆ ಎಂದಿನಂತೆ ವಿದ್ಯಾಗಮ ಮುಂದುವರಿಯಲಿದೆ. ಈ ಬಗ್ಗೆ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ಮಂಗಳವಾರ (ಫೆ.16) ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಕೇರಳದಿಂದ ಗಡಿಯ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನೆಗೆಟಿವ್ ಫಲಿತಾಂಶವಿದ್ದರೆ ಮಾತ್ರ ಶಾಲೆಗೆ ಹಾಜರಾಗಬೇಕು. 6ರಿಂದ 8ನೇ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪಾಲಕ ಅಥವಾ ಪೋಷಕರಿಂದ ಒಪ್ಪಿಗೆ ಪತ್ರ ತರುವುದು ಕಡ್ಡಾಯ. ತರಗತಿಗೆ ಹಾಜರಾಗಬೇಕು ಎಂಬ ಕಡ್ಡಾಯ ನಿಯಮವಿಲ್ಲ ಎಂದು ಸೂಚಿಸಲಾಗಿದೆ.
PublicNext
21/02/2021 07:45 am