ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್ ಎಸ್ ಎಲ್ ಸಿ ಶೇ. 30 ಪಠ್ಯ ಕಟ್ : ಸಚಿವ ಸುರೇಶ್ ಕುಮಾರ್

ಮಂಗಳೂರು : ಕೊರೊನಾದಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಸದ್ಯ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಶೇ. 70ರಷ್ಟು ಪಠ್ಯಕ್ರಮ ಮಾತ್ರ ಇರಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಈ ವಿಚಾರವಾಗಿ ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು, ಪೋಷಕರ ಜತೆ ಈಗಾಗಲೇ ಚರ್ಚಿಸಿದ್ದೇನೆ ಎಂದು ಮಂಗಳೂರಿನಲ್ಲಿ ಹೇಳಿದ್ದಾರೆ.

ಕೊರೊನಾದಿಂದಾಗಿ ಈ ವರ್ಷ ಅನೇಕ ಹೆತ್ತವರು ಶುಲ್ಕ ಪಾವತಿಸುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಈ ಸಮಸ್ಯೆಗೆ ಹೆತ್ತವರು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಯವರು ಪರಸ್ಪರ ಸಮಾಲೋಚನೆ ನಡೆಸಿ ಒಂದು ತೀರ್ಮಾನಕ್ಕೆ ಬರಬೇಕಿತ್ತು. ಇದು ನಡೆಯದ ಕಾರಣ ಸರಕಾರ ಶುಲ್ಕ ಕಡಿತದ ತೀರ್ಮಾನ ತೆಗೆದುಕೊಳ್ಳಬೇಕಾಯಿತು. ಶೇ. 30 ಶುಲ್ಕ ಕಡಿತಗೊಳಿಸಿರುವ ಸರಕಾರದ ನಿರ್ಧಾರದ ವಿರುದ್ಧ ಖಾಸಗಿ ಶಾಲೆಯವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಶುಲ್ಕ ರಿಯಾಯಿತಿ ಸಂಬಂಧಿಸಿದ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರ ಸೂತ್ರವೊಂದನ್ನು ಕಂಡು ಹಿಡಿಯುತ್ತೇವೆ. ಈಗಾಗಲೇ ಆಗಿರುವ ಪೂರ್ಣ ಶುಲ್ಕ ಪಾವತಿಯನ್ನು ಮುಂದಿನ ವರ್ಷದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು.

Edited By : Nirmala Aralikatti
PublicNext

PublicNext

28/02/2021 07:32 am

Cinque Terre

38.07 K

Cinque Terre

1