ಬೆಂಗಳೂರು : ಕೊರೊನಾ ನಡುವೆಯೂ ರಾಜ್ಯದಲ್ಲಿ ಜುಲೈ.19 ಮತ್ತು 22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಅದರಂತೆ ನಾಳೆ ಅ. 7 ರಂದು ಪರೀಕ್ಷೆ ಫಲಿತಾಂಶ ಕೂಡ ನೀಡುವುದಾಗಿ ಹೇಳಲಾಗಿತ್ತು. ಆದರೆ ನಾಳೆ ರಿಸಲ್ಟ್ ಬರಲ್ಲಾ ಎಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ SSLC ಪರೀಕ್ಷಾ ಮಂಡಳಿಯ ನಿರ್ದೇಶಕಿ ಸುಮಂಗಲಾ ಅವರು ಮಾಹಿತಿ ನೀಡಿದ್ದು, ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸುವಂತೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಆ ಕುರಿತಂತೆ ಸದ್ಯದಲ್ಲೇ ಮಾಹಿತಿಯನ್ನು ನೀಡುವುದಾಗಿ ತಿಳಿಸಿದ್ದಾರೆ. ಆದ್ದರಿಂದ ನಾಳೆ ಪ್ರಕಟಗೊಳ್ಳಲಿದೆ ಎಂಬುದಾಗಿ ಹೇಳಲಾಗಿದ್ದ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ, ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
PublicNext
06/08/2021 06:24 pm