ಬೆಂಗಳೂರು : 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದ್ದು, ಓರ್ವ ವಿದ್ಯಾರ್ಥಿ ಹೊರತಾಗಿ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಿದ್ದಾರೆ. ಕಳೆದ ಜುಲೈ 29 ಮತ್ತು 31ರಂದು ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಒಟ್ಟು 8.71 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇಂದು ಮಧ್ಯಾಹ್ನ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶೇ. 99.9 ಮಕ್ಕಳು ಪಾಸ್ ಆಗಿದ್ದಾರೆ.
ಕೊರೊನಾ ಹಿನ್ನೆಲೆ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ನಿರ್ಧರಿಸಿದ್ದೆವು. ಆದರೆ, ಪರೀಕ್ಷೆಯಲ್ಲಿ ಒಬ್ಬ ವಿದ್ಯಾರ್ಥಿನಿ ಬದಲಿ ಪರೀಕ್ಷೆ ಬರೆದು ಡಿಬಾರ್ ಆಗಿದ್ದ ಹಿನ್ನೆಲೆಯಲ್ಲಿ ಶೇ.100 ಫಲಿತಾಂಶ ಬಂದಿಲ್ಲ ಎಂದರು. ಪರೀಕ್ಷೆಯಲ್ಲಿ ಗ್ರೇಡ್ ಗಳನ್ನು ನೀಡಲಾಗಿದ್ದು.,ಯಾರನ್ನೂ ಅನುತ್ತೀರ್ಣ ಮಾಡಿಲ್ಲ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ಸೈಟ್ https://karresults.nic.in/ ಇಲ್ಲಿ ಕ್ಲಿಕ್ ಮಾಡುವ ಮೂಲಕ ಫಲಿತಾಂಶ ನೋಡಬಹುದು. ಎಸ್ ಎಸ್ ಎಲ್ ಸಿಗೆ ಸಂಬಂಧಿಸಿದ ಯಾವುದೇ ದೂರು, ಮಾಹಿತಿಗಳು ಬೇಕಿದ್ದರೆ https://sslc.karnataka.gov.in/ ಈ ಲಿಂಕ್ ಮೇಲೆ ಕ್ಲಿಕ್ಕಿಸಿ.
PublicNext
09/08/2021 04:03 pm