ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಕ್ಷಣ ನೀತಿ ವಿರೋಧಿಸಿ ಪ್ರೊಟೆಸ್ಟ್ : ಲಾಠಿಚಾರ್ಜ್ ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ ಮಾಡಲಾಗಿದೆ. ಹೌದು ನಗರದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಲಾಠಿಚಾರ್ಜ್ ನಡೆದಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಲಾಗಿದೆ. ಈ ವೇಳೆ ಇಬ್ಬರು ವಿದ್ಯಾರ್ಥಿಗಳಿ ಗಾಯವಾಗಿದೆ.

ಲಾಠಿಚಾರ್ಜ್ ವೇಳೆ ಮುಖ್ತಾರ್ ಹಾಗೂ ಅರ್ಮಾನ್ ಎಂಬವರಿಗೆ ಗಾಯವಾಗಿದೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಮೊದಲು, ಎನ್ ಇಪಿ ಅಂದ್ರೆ ನಾಗ್ಪುರ್ ಶಿಕ್ಷಣ ನೀತಿ ಎಂದಿದ್ದ ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ತಿರುಗೇಟು ನೀಡಿದ್ದರು.

ಹೊಸ ಶಿಕ್ಷಣ ನೀತಿಯ (NEP) ಬಗ್ಗೆ ಗೊತ್ತಿಲ್ಲದಿದ್ರೆ ಬೇರೆಯವರ ಬಳಿ ಕೇಳಿ ತಿಳಿಯಲಿ. ಇಲ್ಲದಿದ್ರೆ ಪರಿಷತ್ ನಲ್ಲಿ ನಾನೇ ಅವರಿಗೆ ತಿಳಿಸುತ್ತೇನೆ. ಡಿ.ಕೆ. ಶಿವಕುಮಾರ್ ಹೇಳಿಕೆ ಅವರಿಗೇ ತಿರುಗುಬಾಣವಾಗುತ್ತೆ. ಎನ್ ಇಪಿ ಬಗ್ಗೆ ಡಿಕೆಶಿ ನ್ಯಾಯಬದ್ಧವಾಗಿ ವಿರೋಧಿಸುತ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಶಿಕ್ಷಕರಿಗೆ ಅಪಮಾನ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಭಾನುವಾರ ಹೇಳಿಕೆ ನೀಡಿದ್ದರು. ಭಾರತ ಅಭಿವೃದ್ಧಿ ದೇಶ ಆಗಬೇಕು, ಅಂದ್ರೆ ರಾಷ್ಟ್ರೀಯ ಶಿಕ್ಷಣ ನೀತಿ ಸಹಾಯ ಆಗುತ್ತೆ. ಎಂದು ಅಶ್ವತ್ಥ್ ನಾರಾಯಣ ಹೇಳಿದ್ದರು.

Edited By : Nirmala Aralikatti
PublicNext

PublicNext

14/09/2021 07:19 pm

Cinque Terre

28.5 K

Cinque Terre

0