ಬೆಂಗಳೂರು : ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೇ ಹಿಂದಿನ ದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕರ್ನಾಟಕ ಅನುದಾನ ರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ ಮತ್ತು ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ವೃತ್ತಿ ಪರ ಕಾಲೇಜುಗಳ ಸಂಘದ ಪ್ರತಿನಿಧಿಗಳ ಜತೆ ಬುಧವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಕೈಗೊಂಡಿರುವುದಾಗಿ ಸಚಿವರು ತಿಳಿಸಿದ್ದಾರೆ.
ಹೀಗಾಗಿ, ಈ ಮುಂಚಿನಂತೆಯೇ ಸರ್ಕಾರಿ ಕೋಟಾದಡಿ ಪ್ರವೇಶಾತಿ ಪಡೆಯುವವರಿಗೆ ರೂ 65,340, ರೂ 58,806 ಈ ಎರಡು ಸ್ಲ್ಯಾಬ್ ಗಳಲ್ಲಿ ಶುಲ್ಕಗಳು ಮುಂದುವರಿಯಲಿವೆ ಎಂದು ಅವರು ಸ್ಪಷ್ಟಪಡಿಸಿದರು.
ಕನ್ನಡ ಮಾಧ್ಯಮ
ಇದೇ ಮೊದಲ ಬಾರಿಗೆ ಇಂಜಿನಿಯರಿಂಗ್ ಕ್ಲಾಸ್ ನ್ನು ಕನ್ನಡ ಮಾಧ್ಯಮದಲ್ಲಿ ಮಾಡೋಕೆ ನಾಲ್ಕು ಕಾಲೇಜು ಮುಂದೆ ಬಂದಿದೆ
ಬಾಲ್ಕಿ - ಖಂಡ್ರೆ ಕಾಲೇಜು
ಎಸ್ ಜೆ ಸಿ - ಚಿಕ್ಕಬಳ್ಳಾಪುರ
ಮಹಾರಾಜ - ಮೈಸೂರು
ವಿಜಯಪುರ - ಬಿ ಎಲ್ ಡಿ
ಮೂವತ್ತು ಪ್ರತಿಶತ ಕನ್ನಡ ಮಾಧ್ಯಮಕ್ಕೆ ಸೀಟ್ ಮೀಸಲಿಡುವುದಾಗಿ ಹೇಳಿವೆ.
PublicNext
29/09/2021 04:18 pm