ಬೆಂಗಳೂರು : ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಇಲಾಖೆ ಸಚಿವ ಬಿ ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇನ್ನು ಪೂರಕ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. 599 ಅಂಕಗಳೊಂದಿಗೆ ಉತ್ತೀರ್ಣ ಹೊಂದಿರುವ ಗ್ರೀಷ್ಮಾ ನಾಯ್ಕ್ ಪೂರಕ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.
ಸೆಪ್ಟೆಂಬರ್ 27 ಹಾಗೂ 29ರಂದು ನಡೆದಿದ್ದ ಪರೀಕ್ಷೆಯಲ್ಲಿ ಒಟ್ಟು 53,155 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯ ಪೂರಕ ಪರೀಕ್ಷೆಯಲ್ಲಿ ರಾಜ್ಯವು 55.54 ಪ್ರತಿಶತ ಫಲಿತಾಂಶ ದಾಖಲಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ವಿದ್ಯಾರ್ಥಿಗಳು http:/.sslc.Karnataka.gov.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಸೆಪ್ಟೆಂಬರ್ 27 ಹಾಗೂ 29ರಂದು ಶಿಫ್ಟ್ ಮಾದರಿಯಲ್ಲಿ ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಸಲಾಗಿತ್ತು. ಪ್ರತಿ ವಿಷಯಕ್ಕೆ 40 ಅಂಕಗಳ ಪರೀಕ್ಷೆ ಮಾಡಲಾಗಿತ್ತು. ಹಾಗೂ ಬಹು ಆಯ್ಕೆ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿತ್ತು.
PublicNext
11/10/2021 12:13 pm