ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಪ್ರೀತಿಯ ಶಿಕ್ಷಕರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಗದಗ: ಶಿಕ್ಷಕರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಹಳ್ಳಿಗುಡಿ ಶಾಲೆಯ ಮುಖ್ಯೋಪಾಧ್ಯಾಯ ಜಿ ಆರ್ ಮುಲ್ಲಾ ವರ್ಗಾವಣೆ ಖಂಡಿಸಿ ತರಗತಿ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದಾರೆ.

ಏಳು ವರ್ಷಗಳಿಂದ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಹಿಂದಿ ವಿಷಯ ಭೋದನೆ ಮಾಡುತ್ತಿದ್ದರು. ನಿನ್ನೆ ನಡೆದ ಕೌನ್ಸಲಿಂಗ್ ನಲ್ಲಿ ಇವರ ವರ್ಗಾವಣೆ ಆದೇಶ ನೀಡಲಾಗಿದೆ.ಇದರಿಂದ ವಿದ್ಯಾರ್ಥಿಗಳು ತಮ್ಮ ಪ್ರೀತಿಯ ಶಿಕ್ಷಕರ ವರ್ಗಾವಣೆ ಬೇಡವೆಂದು ಕಣ್ಣೀರು ಹಾಕಿದ್ದಾರೆ.

Edited By : Manjunath H D
PublicNext

PublicNext

30/11/2021 02:01 pm

Cinque Terre

40.43 K

Cinque Terre

5