ಅನೇಕಲ್: ಖಾಸಗಿ ಶಾಲೆಯಲ್ಲಿ ಶುಲ್ಕ ಪಾವತಿ ಮಾಡದ ಹಿನ್ನೆಲೆಯಲ್ಲಿ 30 ರಿಂದ 40 ಜನ ಮಕ್ಕಳನ್ನು ಹೊರಗಡೆ ನಿಲ್ಲಿಸಿದ ಘಟನೆಯೊಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸರಸ್ವತಿ ವಿದ್ಯಾಮಂದಿರದಲ್ಲಿ ಇಂದು ನಡೆದಿದೆ.
ಇಂದು ಬೆಳಗ್ಗೆ ಎಂದಿನಂತೆ ಶಾಲೆಗೆ ಮಕ್ಕಳು ಬಂದಿರುವಾಗ ಶುಲ್ಕ ಕಟ್ಟದ ಮಕ್ಕಳನ್ನ ಶಾಲೆಯ ಆಡಳಿತ ಮಂಡಳಿ ಮಕ್ಕಳನ್ನು ಹೊರಗಡೆ ನಿಲ್ಲಿಸಿ, ಪೋಷಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ಇನ್ನು ಇದೇ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದ ಹೆಣ್ಣು ಮಗುವೊಂದು ಪೋಷಕರಿಗೆ ಕರೆ ಮಾಡಿ ತಿಳಿಸಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.. ಇನ್ನು ಈ ಸುದ್ದಿ ಮಾಧ್ಯಮಗಳಿಗೆ ತಿಳಿಯುತ್ತಿದ್ದಂತೆ ಎಲ್ಲಾ ಮಕ್ಕಳನ್ನು ಒಳಗೆ ಕರೆದುಕೊಂಡಿದ್ದಾರೆ.. ಇನ್ನು ಈ ಖಾಸಗಿ ಸರಸ್ವತಿ ವಿದ್ಯಾ ಸಂಸ್ಥೆ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದು ಪೋಷಕರು ಒಂದು ವೇಳೆ ದೂರು ಕೊಟ್ಟ ಸಂದರ್ಭದಲ್ಲಿ ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
PublicNext
04/02/2022 01:06 pm