ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಚಿತ ಕಂಪ್ಯೂಟರ್ ತರಬೇತಿ ಆಸಕ್ತರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ನಿರುದ್ಯೋಗ ನಿವಾರಣೆಗೆ ಮುಂದಾಗಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಾಜ್ಞಾನ ತರಬೇತಿ ಸಂಸ್ಥೆಯು ಯುವಕ- ಯುವತಿಯರಿಗೆ 3 ತಿಂಗಳು ಉಚಿತ ಕಂಪ್ಯೂಟರ್ ಹಾಗೂ ಹಾರ್ಡ್ವೇರ್ ಮತ್ತು ನೆಟ್ವರ್ಕ್ ಅಡ್ಮಿನಿಸ್ಟ್ರೇಷನ್ ತರಬೇತಿ ನೀಡುತ್ತಿದೆ. ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿ ಪಿಯುಸಿ, ಪದವಿ, ಡಿಪ್ಲೊಮಾ ಓದಿದವರು 18ರಿಂದ 27 ವರ್ಷದೊಳಗಿನರು ಹಾಗೂ ಪರಿಶಿಷ್ಟ ಜಾತಿ/ ವರ್ಗದದಲ್ಲಿ 30 ವರ್ಷದವರೆಗಿನವರು ತರಬೇತಿ ಪಡೆಯಬಹುದು.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಾಜ್ಞಾನ ತರಬೇತಿ ಸಂಸ್ಥೆಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಪ್ರತಿದಿನ ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನಗಳು ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ಮಾಹಿತಿ ತಂತ್ರಾಜ್ಞಾನ ತರಬೇತಿ ಸಂಸ್ಥೆ, ಚಿತ್ರಾಪುರ ಭವನ, ಮಲ್ಲೆಶ್ವರ, ಬೆಂಗಳೂರು. ದೂ: 2344 0036, 2346 3580, 94485 38107ಗೆ ಸಂಪರ್ಕಿಸಿ.

Edited By : Nirmala Aralikatti
PublicNext

PublicNext

06/04/2022 05:30 pm

Cinque Terre

22.75 K

Cinque Terre

0