ಬೆಂಗಳೂರು: ರಾಜ್ಯದ ‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ’ಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರು ನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಈ ಕುರಿತು ಟ್ವೀಟ್ ಮಾಡಿದ್ದು, ರಾಜ್ಯದ ‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ’ಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರು ನಾಮಕರಣ ಮಾಡಲಾಗಿದೆ.
12ನೇ ತರಗತಿ ವರೆಗಿನ ಶಿಕ್ಷಣವು ಶಾಲಾ ಶಿಕ್ಷಣ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಅಂಶವನ್ನು‘ರಾಷ್ಟ್ರೀಯ ಶಿಕ್ಷಣ ನೀತಿ-2020’ರಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲಾಗಿದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು (ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಒಳಗೊಂಡಂತೆ) ಪದನಾಮವನ್ನು ಬದಲಾವಣೆ ಮಾಡಲಾಗಿದೆ. ಹೀಗಾಗಿ ತಕ್ಷಣಕ್ಕೆ ಜಾರಿಗೆ ಬರುಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರು ನಾಮಕರಣಗೊಳಿಸಿ ಆದೇಶಿಸಲಾಗಿದೆ.
PublicNext
25/06/2022 01:58 pm