ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್‌ಎಲ್‌ಸಿ ಪೂರಕ ಪರೀಕ್ಷೆ

ಬೆಂಗಳೂರು - ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಆರಂಭವಾಗಿದ್ದು, ಜುಲೈ 4ರ ವರೆಗೆ ಪೂರಕ ಪರೀಕ್ಷೆ ನಡೆಯಲಿದೆ. 2021-22ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀ ರ್ಣವಾಗಿರುವ ವಿದ್ಯಾರ್ಥಿಗಳಿಗೆ, ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಮೇ 19 ರಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿತ್ತು.

ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ, 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮ ವಹಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ ಮುನ್ನಾ, ನಂತರ ಸ್ಯಾನಿಟೈಸ್ ಮಾಡುವುದು. ಪರೀಕ್ಷಾ ಕೊಠಡಿಯ ಎಲ್ಲಾ ಪೀಠೋಪಕರಣ ಸ್ಯಾನಿಟೈಸ್ ಮಾಡುವುದು. ದೈಹಿಕ ಅಂತರ ಕಾಪಾಡುವುದು. ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿರಬೇಕು. ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಮಾಡಲಾಗಿದೆ.

Edited By : Nirmala Aralikatti
PublicNext

PublicNext

27/06/2022 12:56 pm

Cinque Terre

27.92 K

Cinque Terre

0