ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕೆ ಗುಣಮಟ್ಟ ಪರಿಶೀಲನೆಗೆ ಪಬ್ಲಿಕ್ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಈ ಪರೀಕ್ಷೆಯನ್ನು ಯಾವ ವರ್ಷದಿಂದ ನಡೆಸಬೇಕು ಎಂಬುದು ಅಕ್ಟೋಬರ್ 12 ರಂದು ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರವಾಗಲಿದೆ.
ಅ.12ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಉನ್ನತ ಮಟ್ಟದ ಸಭೆ ಕರೆದಿದ್ದು, ಸಭೆಯಲ್ಲಿ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಕುರಿತಂತೆ ರೂಪುರೇಷ ಎಲ್ಲವೂ ಸಿದ್ಧವಾಗಲಿದೆ ಎನ್ನಲಾಗಿದೆ.
PublicNext
08/10/2022 04:44 pm