ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ ಮಹಾಭಾರತದ ಅರ್ಜುನ

ಮುಂಬೈ: 2013ರಲ್ಲಿ ಪ್ರಸಾರವಾಗುತ್ತಿದ್ದ ಮಹಾಭಾರತ ಧಾರಾವಾಹಿಯ ಅರ್ಜುನ ಪಾತ್ರದ ಶಾಹೀರ್ ಶೇಖ್ ಸಾಂಸಾರಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸರಳವಾಗಿ ರಿಜಿಸ್ಟರ್ ಮ್ಯಾರೇಜ್ ಆಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಶಾಹೀರ್ ಶೇಖ್ ಅವರು ನಿರ್ಮಾಪಕಿ ಏಕ್ತಾ ಕಪೂರ್ ಅವರ ಪ್ರೊಡಕ್ಷನ್ ಹೌಸ್‍ನಲ್ಲಿ ಕೆಲಸ ಮಾಡುವ ರುಚಿಕಾ ಕಪೂರ್ ಕೈ ಹಿಡಿದಿದ್ದಾರೆ. ಕೆಲ ದಿನಗಳ ಹಿಂದೆ ಈ ಜೋಡಿ ವಿವಾಹವಾಗಿದ್ದಾರೆ. ಆದ್ರೆ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ಇಬ್ಬರೂ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು. ಇದೀಗ ರಿಜಿಸ್ಟರ್ ವಿವಾಹವಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

2021ರ ಜೂನ್ ತಿಂಗಳಲ್ಲಿ ಜಮ್ಮುವಿನಲ್ಲಿರುವ ಶಾಹೀರ್ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಇವರಿಬ್ಬರ ವಿವಾಹ ನಡೆಯಲಿದ್ದು, ಮುಂಬೈನ ರುಚಿಕಾ ಮನೆಯಲ್ಲಿ ಸಹ ಮದುವೆ ಶಾಸ್ತ್ರಗಳು ನಡೆಯಲಿವೆ. ಇದೀಗ ಸರಳವಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ.

Edited By : Nagaraj Tulugeri
PublicNext

PublicNext

28/11/2020 08:28 am

Cinque Terre

67.57 K

Cinque Terre

4