ಬೆಂಗಳೂರು: 'ಕಾಮಿಡಿ ಕಿಲಾಡಿ' ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಿನ್ನೆ (ಮಂಗಳವಾರ) ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋವಿಂದೇಗೌಡ ಅವರು ನಿನ್ನೆ ಯೋಗರಾಜ್ ಭಟ್ ಅವರ ಸಿನಿಮಾದ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಟ ಗೋವಿಂದೇಗೌಡ ಅವರಿಗೆ ಅಪಘಾತ ಉಂಟಾಗಿತ್ತು. ಕೂಡಲೇ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಮೂಲಗಳ ಪ್ರಕಾರ, ಚಿತ್ರೀಕರಣದ ಸಂದರ್ಭದಲ್ಲಿ ಕಾರಿನ ಸಾಹಸ ದೃಶ್ಯದ ಶೂಟಿಂಗ್ ವೇಳೆಯಲ್ಲಿ ಗೋವಿಂದೇಗೌಡ ಅವರ ಹೊಟ್ಟೆಗೆ ಪೆಟ್ಟು ಬಿದ್ದಿರೋದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ ಕಾರಣದಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಈ ಕುರಿತಂತೆ ಮಾಹಿತಿ ನೀಡಿರು ನಿರ್ದೇಶಕ ಯೋಗರಾಜ್ ಭಟ್, "ಒಂದು ಚಿಕ್ಕ ಅಪಘಾತವಾಗಿದ್ದು, ಗೋವಿಂದೇಗೌಡ ಅರಾಮಾಗಿದ್ದಾರೆ. ಚಿಕಿತ್ಸೆ ಬಳಿಕ ಮತ್ತೆ ಅವರು ಚಿತ್ರೀಕರಣಕ್ಕೆ ಮರಳಿದ್ದಾರೆ. ಈಗಷ್ಟೇ ನಾವೆಲ್ಲರೂ ಚಿತ್ರೀಕರಣ ಮುಗಿಸಿ ವಾಪಾಸ್ ಬಂದಿದ್ದೇವೆ" ಎಂದು ತಿಳಿಸಿದ್ದಾರೆ.
PublicNext
28/07/2021 10:04 am