ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ಚಕ್ರವರ್ತಿ ಚಂದ್ರಚೂಡ್ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ.
ಬಿಗ್‌ಬಾಸ್ ಮನೆಯೊಳಕ್ಕೆ ಹೋಗುವ ಮುನ್ನ ಭಾರಿ ದೋಸ್ತ್ ಆಗಿದ್ದ ಇವರಿಬ್ಬರು ಸದ್ಯ ಬದ್ಧವೈರಿಗಳು. ಇದೇ ವೈರತ್ವದ ಹಿನ್ನೆಲೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಅವರು ನಗರ ಪೊಲೀಸ್ ಕಮಿಷನರ್ ಕಮಲ್ ಪಂಥ್ ಅವರಿಗೆ ಸಂಬರಗಿ ವಿರುದ್ಧ ದೂರು ನೀಡಿದ್ದಾರೆ.
ರಾಜಕೀಯ ವ್ಯಕ್ತಿ, ಸಿನಿಮಾ ನಟ-ನಟಿಯರ ವಿರುದ್ಧ ಸಾಕ್ಷ್ಯಗಳು ಇಲ್ಲದೆ ಪ್ರಶಾಂತ್ ಸಂಬರಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಬೆದರಿಕೆ ಹಾಕುತ್ತ ಸಂಬರಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯ ಕ್ರಮಕೈಗೊಳ್ಳಿ ಎಂದು ಚಕ್ರವರ್ತಿ ಚಂದ್ರಚೂಡ್ ಆಗ್ರಹಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮೀಟೂ ಪ್ರಕರಣದಲ್ಲಿ ಗಾಳಿಯಲ್ಲಿ ಗುಂಡು ಹೊಡೆದಿದ್ದರು. ಶೃತಿ ಹರಿಹರನ್‌ಗೆ ಕ್ರೈಸ್ತ ಮಿಷನರಿಯಿಂದ ಕೋಟ್ಯಂತರ ಹಣ ಸಂದಾಯವಾಗಿದೆ ಎಂದು ಹೇಳಿದ್ದರು. ಆದರೆ ಯಾವುದೇ ಸಾಕ್ಷ್ಯಾಧಾರ ಕೊಡಲಿಲ್ಲ. ಶಾಸಕ ಜಮೀರ್ ಅಹಮ್ಮದ್ ತೆರಿಗೆ ಹಣದಲ್ಲಿ ಶ್ರೀಲಂಕಾ ಕ್ಯಾಸಿನೋಗೆ ಹೋಗಿ ಮೋಜು-ಮಸ್ತಿ ಮಾಡ್ತಿದ್ದಾರೆ ಎಂದು ವೃಥಾ ಆರೋಪಿಸಿದ್ದರು. ನಟಿ, ನಿರೂಪಕಿ ಅನುಶ್ರೀ ಸೇರಿದಂತೆ ಕೆಲವರು ನಟಿಯರು ಡ್ರಗ್ಸ್ ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿರುವುದಾಗಿ ಆರೋಪಿಸಿದ್ದಾರೆ. ಅದರ ಸಾಕ್ಷ್ಯಾಧಾರಗಳೂ ಇಲ್ಲ. ಆದ್ದರಿಂದ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ ಚಕ್ರವರ್ತಿ ಒತ್ತಾಯಿಸಿದ್ದಾರೆ.
PublicNext
15/09/2021 10:16 pm